ಸಂಪಾಜೆ:ಸಂಪಾಜೆಯ ಪ್ರಮುಖರ ನಿಯೋಗ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಭೇಟಿಯಾಗಿ ವಿವಿಧ ಅಭಿವೃದ್ಧಿ ಬೇಡಿಕೆಗಳನ್ನು ಮುಂದಿಟ್ಟಿತು.ಸುಳ್ಯ ತಾಲೂಕಿನ ವಿದ್ಯುತ್ ಸಮಸ್ಯೆಯ ಬಗ್ಗೆ ಮೆಸ್ಕಾಂ ಸಲಹಾ ಸಮಿತಿ ಅಧ್ಯಕ್ಷರ ಗಮನಕ್ಕೆ ತರಲಾಯಿತು. ಸುಳ್ಯದಲ್ಲಿ ತಕ್ಷಣ ಸಭೆ ಕರೆದು ಚರ್ಚೆ ಮಾಡಿ ಶೀಘ್ರ 110 ವಿದ್ಯುತ್ ವ್ಯವಸ್ಥೆ ಬಗ್ಗೆ
ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಹಾಗೂ ಅಪರ ಜಿಲ್ಲಾಧಿಕಾರಿ ರಾಜು ಅವರನ್ನು ಭೇಟಿಯಾಗಿ ಸಂಪಾಜೆ ಗ್ರಾಮದ ಅಭಿವೃದ್ಧಿಗೆ ಪ್ರಾಕೃತಿಕ ವಿಕೋಪದ ಅನುದಾನ ಒದಗಿಸುವಂತೆ ವಿನಂತಿಸಲಾಯಿತು. ಸಂಪಾಜೆ ಗ್ರಾಮದಲ್ಲಿ ಮರಳಿನ ಕೊರತೆಯಿಂದಾಗಿ ಗ್ರಾಮದಲ್ಲಿ ರಸ್ತೆ ಕಾಂಕ್ರಿಟ್ ಕಾಮಗಾರಿ, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಹಲವು ಕಾಮಗಾರಿಗಳಿಗೆ ತೊಂದರೆಯಾಗುತ್ತಿದೆ ಈ ಬಗ್ಗೆ ಗಮನಕ್ಕೆ ತರಲಾಯಿತು.ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ನಿಯೋಗದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಮಾಜಿ ಅಧ್ಯಕ್ಷರಾದ ಜಿ.ಕೆ. ಹಮೀದ್ ಗೂನಡ್ಕ ಸುಂದರಿ ಮುಂಡಡ್ಕ ಸದಸ್ಯರಾದ ವಿಮಲಾ ಪ್ರಸಾದ್ ಮತ್ತಿತರರು ಇದ್ದರು.















