ಸುಳ್ಯ:ದ.ಕ. ಜಿಲ್ಲೆ, ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಸಂಪಾಜೆ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ನಡೆಯಿತು. ಪೂರ್ಣಕುಂಭ ಸ್ವಾಗತ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕಾಲ್ನಡಿಗೆ , ಚಂಡೆ ಬ್ಯಾಂಡ್ ಸೆಟ್ ನೊಂದಿಗೆ
ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಉಪಾಧ್ಯಕ್ಷ ಎಸ್.ಕೆ.ಹನೀಫ ಹಾಗೂ ಎಲ್ಲ ಸದಸ್ಯರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂವಿಧಾನ ಕುರಿತು ಭಾಷಣ, ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು, ಇತ್ಯಾದಿ ಕಾರ್ಯಕ್ರಮ ನಡೆಯಿತು.









