ಸಂಪಾಜೆ:ಸಂಪಾಜೆ ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ ಗ್ರಾ.ಪಂ. ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾ ಭವನದಲ್ಲು ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಬೀದಿ ನಾಯಿ ಹಾವಳಿ, ಬಿಡಾಡಿ ದನಗಳ ಹಾವಳಿ ಬಗ್ಗೆ
ಚರ್ಚೆ ನಡೆದು ಅದರ ತಡೆಗೆ ಕ್ರಮಕ್ಕೆ ಸದಸ್ಯರು ಆಗ್ರಹಿಸಿದರು.
ಸಾಮಾಜಿಕ ಅರಣ್ಯದಲ್ಲಿ ಬಾಕಿ ಇರುವ ಅಕೇಶಿಯ ಮರದ ತೆರವು ಮಾಡಿ ಹಣ್ಣು ಹಂಪಲು ಮರ ಬೆಳೆಸುವ ಬಗ್ಗೆ ಪ್ರಸ್ತಾಪ ಮಾಡಲಾಯಿತು.
ವಿದ್ಯುತ್ ಸಮಸ್ಯೆ ಬಗ್ಗೆ ಸದಸ್ಯರು ಸಭೆಯಲ್ಲಿ ಮಾತನಾಡಿ ಪರಿಹಾರಕ್ಕೆ ಒತ್ತಾಯಿಸಿದರು. ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ,ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸದಸ್ಯರಾದ ಜಗದೀಶ್ ರೈ ,ಸುಂದರಿ ಮುಂಡಡ್ಕ ರಜನಿ ಶರತ್,ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಪಮ, ಸಹಕಾರಿ ಸಂಘದ ವ್ಯವಸ್ಥಾಪಕರಾದ ವಿರೇಂದ್ರ ಜೈನ್, ಕಲ್ಲುಗುಂಡಿ ಆರ್.ಎಂ.ಎಸ್.ಎ ಪ್ರೌಢಶಾಲೆ ಮುಖ್ಯ ಗುರುಗಳಾದ ಚಂದ್ರಾವತಿ, ದ.ಕ.ಜಿ.ಪ.ಹಿರಿಯ ಪ್ರಾಥಮಿಕ. ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.