ಸುಳ್ಯ:ಸಂಪಾಜೆ ಗ್ರಾಮ ಪಂಚಾಯತಿನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಹಾಗೂ ಸಭಾಕಾರ್ಯಕ್ರಮ ಫೆ.11ರಂದು ನಡೆಯಲಿದೆ ಎಂದು ಪಂಚಾಯತ್ ಅಧ್ಯಕ್ಷರು ಹಾಗೂ
ಸದಸ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಗೂನಡ್ಕ ಸಜ್ಜನ ಸಮುದಾಯಭವನದಲ್ಲಿ ನಡೆಯುವ ಸಮಾರಂಭದಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ದಿನೇಶ್ ಗುಂಡೂರಾವ್, ಪ್ರಿಯಾಂಕ ಖರ್ಗೆ, ಸಂಸದರು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ನಿಗಮ ಮಂಡಳಿ ಅಧ್ಯಕ್ಷರುಗಳು ಮತ್ತಿತರರು ಭಾಗವಹಿಸಲಿದ್ದಾರೆ. ಜೆಜೆಎಂ ಕುಡಿಯುವ ನೀರಿನ ಯೋಜನೆ ಸೇರಿದಂತೆ ಸುಮಾರು 7 ಕೋಟಿಗೂ ಮಿಕ್ಕಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್.ಕೆ.ಮಹಮ್ಮದ್ ಹನೀಫ, ಸದಸ್ಯರಾದ ಜಿ.ಕೆ.ಹಮೀದ್, ಸುಂದರಿ ಮುಂಡಡ್ಕ, ವಿಮಲಾ ಪ್ರಸಾದ್ ಉಪಸ್ಥಿತರಿದ್ದರು.







