ಸಂಪಾಜೆ:ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಸ್ವಾಗತಿಸಿ ಕಾರ್ಯದರ್ಶಿ ತಿರುಮಲೇಶ್ವರ ಲೆಕ್ಕ ಪತ್ರ ಮಂಡಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿ ಮತ್ತು ಸ್ವಚ್ಛತೆ ಬಗ್ಗೆ ವಿಶೇಷ ಗಮನ ಹರಿಸಲು ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯತಿಯಲ್ಲಿ
ಅಳವಡಿಸಿರುವ ಮಳೆ ಮಾಪನ ಯಂತ್ರದ ಬಗ್ಗೆ ಸದಸ್ಯರು ಪ್ರಸ್ತಾಪ ಮಾಡಿದರು. ಹವಾಮಾನ ವರದಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಬೆಳೆ ವಿಮೆ ಕಡಿಮೆ ಬಂದಿರುವ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲು ತೀರ್ಮಾನಿಸಲಾಯಿತು.
ಗ್ರಾಮ ಪಂಚಾಯತ್ ಅಭಿವೃದಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮಾಡಲು ಅತಿಥಿ ಕರೆಯಲು ತೀರ್ಮಾನಿಸಲಾಯಿತು
ಭಾರತ ಕೃಷಿ ಅಬಿವೃದಿ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ಜಂಟಿಯಾಗಿ ಕೃಷಿ ಮೇಳ ನಡೆಸಲು ತೀರ್ಮಾನಿಸಲಾಯಿತು
ಮೆಸ್ಕಾಂ ವಿದ್ಯುತ್ ಬಿಲ್ ಸಮರ್ಪಕವಾಗಿಲ್ಲ ಈ ಬಗ್ಗೆ ಇಲಾಖೆಯ ಗಮನಕ್ಕೆ ತರಲು ತೀರ್ಮಾನಿಸಲಾಯಿತು
ಇಂಜಿನಿಯರ್ ಕೊರತೆ ಇರುವುದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆ ಆಗುತ್ತಿದ್ದು ಸಕಾಲದಲ್ಲಿ ಕೆಲಸ ಆಗುತ್ತಿಲ್ಲ ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲು ತೀರ್ಮಾನಿಸಲಾಯಿತು
ಗ್ರಾಮದ ಎಲ್ಲಾ ರಸ್ತೆ ಅಂಗನವಾಡಿ ಕೇಂದ್ರ ಗಳ ಅಭಿವೃದ್ಧಿ ಕಾಮಗಾರಿ ಅದಷ್ಟು ಶೀಘ್ರ ಮುಗಿಸಲು ತೀರ್ಮಾನಿಸಲಾಯಿತು
ಸಭೆಯಲ್ಲಿ ಉಪಾಧ್ಯಕ್ಷರಾದ ಎಸ್ ಕೆ ಹನೀಫ್, ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಸೋಮಶೇಖರ್ ಕೆ. ಆರ್. ಜಿ ಕೆ ಹಮೀದ್ ಗೂನಡ್ಕ . ಸುಂದರಿ ಮುಂಡಡ್ಕ, ಜಗದೀಶ್ ರೈ ಸದಸ್ಯರುಗಳಾದ ಅಬುಸಾಲಿ ಗೂನಡ್ಕ, ಶೌವಾದ್ ಗೂನಡ್ಕ, ವಿಮಲಾ ಪ್ರಸಾದ್, ರಜನಿ ಶರತ್ , ಅನುಪಮ, ಸುಶೀಲ, ಲಿಸ್ಸಿ ಮೊನಾಲಿಸಾ, ಉಪಸ್ಥಿತರಿದ್ದರು.





