ಸಂಪಾಜೆ: ಬಿಸಿಲ ಬೇಗೆಗೆ ಮತ್ತು ಏರಿದ ಉಷ್ಣಾಂಶಕ್ಕೆ ಕಾದು ಕೆಂಡದಂತಾಗಿದ್ದ ಇಳೆಗೆ ತಂಪೆರೆದು ಸಂಪಾಜೆ ಹಾಗೂ ಪರಿಸರದಲ್ಲಿ ಉತ್ತಮ ಮಳೆ ಸುರಿದಿದೆ. ಸಂಪಾಜೆಯ ಕಲ್ಲುಗುಂಡಿ, ಕಡೆಪಾಲ ಸೇರಿದಂತೆ ಉತ್ತಮ ಮಳೆಯಾಗಿದೆ. ಸಂಜೆ 5 ಗಂಟೆಯ ಬಳಿಕ ಆರಂಭಗೊಂಡ ಮಳೆ ಅರ್ಧ ಗಂಟೆಗಳ ಕಾಲ
ಮಳೆ ಸುರಿಯಿತು. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆಯ ವೇಳೆಗೆ ಮಳೆಯಾಗಿದೆ. ರಸ್ತೆಯಲ್ಲಿ ಚೆನ್ನಾಗಿ ನೀರು ಹರಿದು ಹೋಗುವಷ್ಟು ಮಳೆಯಾಗಿದೆ ಎಂದು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ.ಹಮೀದ್ ಮಾಹಿತಿ ನೀಡಿದ್ದಾರೆ. ಸುಳ್ಯ ನಗರ ಹಾಗೂ ಪರಿಸರದಲ್ಲಿ ಸಂಜೆಯ ವೇಳೆಗೆ ದಟ್ಟ ಮೋಡ ಕವಿದಿದ್ದರೂ ಮಳೆಯಾಗಿಲ್ಲ.
ಸಂಪಾಜೆ ಭರ್ಜರಿ ಮಳೆ
ಶುಕ್ರವಾರ ಮಂಗಳೂರು ನಗರ ಸೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿತ್ತು. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಹಲವೆಡೆ ಮಳೆಯಾಗಿತ್ತು. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಅಲ್ಲಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಕರಾವಳಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು
ದಕ್ಷಿಣ ಕನ್ನಡ, ಉಡುಪಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇತ್ತು.














