ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ರಾಜ್ಯೋತ್ಸವದ ಅಂಗವಾಗಿ
ರಂಗೋಲಿ ಬಿಡಿಸಿ ಕನ್ನಡದ ಗೀತೆ ಹಾಡಲಾಯಿತು. ಸಭೆಯಲ್ಲಿ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ ಉಪಾಧ್ಯಕ್ಷ ಎಸ್. ಕೆ. ಹನೀಫ್ ಮಾಜಿ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸಂಜೀವಿನಿ ಒಕ್ಕೂಟದ ಕಾಂತಿ ಬಿ. ಎಸ್. ಯಶೋದಾ, ಸುಶೀಲಾ ಪಂಚಾಯತ್ ಕಾರ್ಯದರ್ಶಿ ಪದ್ಮಾವತಿ ಸಿಬ್ಬಂದಿಗಳಾದ ಭರತ್, ಮಧುರ, ಸವಿತಾ, ಉಮೇಶ್, ಗುರುವಪ್ಪ ಉಪಸ್ಥಿತರಿದ್ದರು