ಸಂಪಾಜೆ: ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿ ಭಾಗದಲ್ಲಿ ಕುಡಿಯುವ ನೀರು ಹಾಗೂ ರಸ್ತೆ ಸಮಸ್ಯೆ ಬಗ್ಗೆ ದ.ಕ. ಸಂಪಾಜೆ ಹಾಗೂ ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ವತಿಯಿಂದ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಯಿತು. ಸಂಪಾಜೆಯ ಹಾಸ್ಟೆಲ್ ಪಕ್ಕದ ರಸ್ತೆ ಹಾಗೂ ಆ ಭಾಗದ
ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ದ.ಕ. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್. ಕೆ. ಹನೀಫ್, ಗ್ರಾ.ಪಂ. ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಕೊಡಗು ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ, ಕೊ.ಸಂಪಾಜೆ ಪಂಚಾಯತ್ ಅಭಿವೃದ್ಧಿ ಅಶಿಕಾರಿ ಶೋಭಾರಾಣಿ, ಉಪಾಧ್ಯಕ್ಷೆ ಪೂರ್ಣಿಮಾ ಅರೆಕಲ್ಲು ಉಪಸ್ಥಿತರಿದ್ದರು.ದ.ಕ. ಸಂಪಾಜೆ ಹಾಗೂ ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಸೇರಿಕೊಂಡು ರಸ್ತೆ ಕುಸಿತ ಆದ ಸ್ಥಳ ದುರಸ್ತಿ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಬಗ್ಗೆ ಚರ್ಚೆ ನಡೆಸಲಾಯಿತು.