ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ.ಶಾಹಿದ್ ತೆಕ್ಕಿಲ್ ಅವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ.ಹನೀಫ್ ಸಂಪಾಜೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಜಿ.ಕೆ.ಹಮೀದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಡಡ್ಕ, ಮಾಜಿ ಅಧ್ಯಕ್ಷ ಕೆ.ಪಿ.ಜಗದೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ. ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷೆ ಯಮುನಾ ಬಿ.ಎಸ್ ಗ್ರಾ.ಪಂ.ಸದಸ್ಯರಾದ ಅಬೂಸಾಲಿ, ವಿಮಲಾ ಪ್ರಸಾದ್, ವಿಜಯ ಕುಮಾರ್,ಅನುಪಮ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಟಿ ಎಂ ಶಾಹಿದ್ ತೆಕ್ಕಿಲ್ ಅವರನ್ನು ಸನ್ಮಾನಿಸಿದೆಉ.
ಮಾಜಿ ಅಧ್ಯಕ್ಷರಾದ ಕೆ.ಪಿ. ಜಗದೀಶ್ ಮಾತನಾಡಿದರು.















