ಸುಳ್ಯ: ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ. ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ
ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ರವರು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ನಿರ್ದೇಶಕರಾದ ಗಣಪತಿ ಭಟ್ ಪಿ. ಯನ್. ಹಾಗೂ ಜಾನಿ ಕೆ. ಪಿ, ಜಿಲ್ಲಾ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.