ಸಂಪಾಜೆ:ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆಯ್ಕೆಯಾದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ನೇತೃತ್ವದಲ್ಲಿ ಸಹಕಾರಿ ಅಭಿವೃದ್ಧಿ ರಂಗದ ಚುನಾಯಿತ ನಿರ್ದೇಶಕರುಗಳು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಮಂಗಳೂರಿನ ಅವರ
ಕಚೇರಿಯಲ್ಲಿ ಭೇಟಿ ಮಾಡಿದರು. ಈ ವೇಳೆ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಅವರನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು. ಉಪಾಧ್ಯಕ್ಷೆ ಯಮುನಾ ಬಿ.ಎಸ್, ನಿರ್ದೇಶಕರಾದ ಮಹಮ್ಮದ್ ಕುಂಞಿ ಗೂನಡ್ಕ, ಕೆ.ಪಿ.ಜಾನಿ ಕಲ್ಲುಗುಂಡಿ, ಕೆ.ಆರ್.ಜಗದೀಶ್ ರೈ ಸೇರಿದಂತೆ ಎಲ್ಲಾ ನಿರ್ದೇಶಕರು ಭೇಟಿಯಾದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಧರ ರೈ ಬಾಲ್ಯೋಟ್ಟು ಉಪಸ್ಥಿತರಿದ್ದರು.