ಸಂಪಾಜೆ:ಫೆಬ್ರವರಿ 16 ರಂದು ನಡೆಯಲಿರುವ ಸಂಪಾಜೆ ವಲಯ ಕಾಂಗ್ರೆಸ್ ಸಮಾವೇಶದ ಪೂರ್ವಭಾವಿಯಾಗಿ ವಾರ್ಡ್ ಸಮಿತಿಗಳ ಸಭೆಗಳು ನಡೆಯುತಿದೆ.ಗೂನಡ್ಕ–ದರ್ಖಾಸ್ತು ವಾರ್ಡ್ ಕಾಂಗ್ರೆಸ್ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ವಹಿಸಿ ಪಕ್ಷ ಸಂಘಟನೆಯ ಬಗ್ಗೆ
ಸಲಹೆ ಸೂಚನೆಗಳನ್ನು ನೀಡಿದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪಾಜೆ ವಲಯ ಕಾಂಗ್ರೆಸ್ ವರ್ಕಿಂಕ್ ಕಮಿಟಿಯ ಅಧ್ಯಕ್ಷರಾದ ಕೆ.ಪಿ.ಜಾನಿ ಅವರು ಫೆಬ್ರವರಿ 16 ರಂದು ಕಲ್ಲುಗುಂಡಿಯಲ್ಲಿ ಜರುಗಲಿರುವ ಕಾಂಗ್ರೆಸ್ ಸಮಾವೇಶದ ಪೂರ್ವಭಾವಿ ಸಿದ್ದತೆ ಹಾಗೂ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ಮಾತನಾಡಿದರು. ಈ ವೇಳೆ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಸೋಮಶೇಖರ್ ಕೊಯಿಂಗಾಜೆ, ಮಹಮ್ಮದ್ ಕುಂಞಿ ಗೂನಡ್ಕ, ಕೆ.ಪಿ.ಜಾನಿ, ಕೆ.ಆರ್.ಜಗದೀಶ್ ರೈ, ಪಿ.ಕೆ.ಅಬೂಸಾಲಿ, ಬಿ.ಎಸ್.ಯಮುನಾ, ಪ್ರಮೀಳಾ ಪೆಲ್ತಡ್ಕ, ಉಷಾ ರಾಮ ನಾಯ್ಕ್ ಅವರನ್ನು ಹಾಗೂ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾದ ಚೇತನ್ ಕಜೆಗದ್ದೆ, ರಾಷ್ಟ್ರೀಯ ಪ್ರೇರಣಾ ದೂತ್ ಅವಾರ್ಡ್ ಪುರಸ್ಕ್ರತರಾದ ದ.ಕ.ಜಿಲ್ಲಾ ಉಬೈಸ್ ಗೂನಡ್ಕ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾಗಿ ನೇಮಕಗೊಂಡ ಬಿ.ಎಸ್.ಕಾಂತಿ ಅವರನ್ನು ಗೂನಡ್ಕ–ದರ್ಖಾಸ್ತು ವಾರ್ಡ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕೆ.ಗೋಕುಲ್ ದಾಸ್, ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಚೇತನ್ ಕಜೆಗದ್ದೆ, ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರ ಭವಾನಿಶಂಕರ್ ಮಾತನಾಡಿದರು. ಸಂಪಾಜೆ ವಲಯ ಕಾಂಗ್ರೆಸ್ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ, ಸಂಪಾಜೆ ವಲಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಎಂ.ಅಶ್ರಫ್, ಸಂಪಾಜೆ ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಐ.ಲೂಕಾಸ್, ತಾಜ್ ಮಹಮ್ಮದ್ ಸಂಪಾಜೆ, ವಸಂತ ಗೌಡ ಪೆಲ್ತಡ್ಕ, ಸೆಬಾಸ್ಟಿಯನ್ ನೆಲ್ಲಿಕುಮೇರಿ, ಲಲನ ಸಂಪಾಜೆ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಸಂಪಾಜೆ ವಲಯ ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಪಿ.ಕೆ.ಅಬೂಸಾಲಿರವರು ಸ್ವಾಗತಿಸಿ, ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.