ಕಲ್ಲುಗುಂಡಿ:ಸಂಪಾಜೆ ವಲಯ ಕಾಂಗ್ರೆಸ್ ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವಿರುದ್ಧ ಕಾರ್ಯಕರ್ತರು, ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರು ರಾಜೀನಾಮೆ ಪತ್ರ ನೀಡಿದರೂ ಸೌಜನ್ಯಕ್ಕಾದರೂ ಯಾಕಾಗಿ ಹೀಗೆ ಮಾಡುತ್ತಿದ್ದೀರಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕೇಳಿಲ್ಲ, ಬ್ಲಾಕ್ ಕಾಂಗ್ರೆಸ್ ಸಮಿತಿ ರಚಿಸಿದ
ಸಂದರ್ಭದಲ್ಲಿ ಸ್ಥಳೀಯ ನಾಯಕರ ಅಭಿಪ್ರಾಯ ಕೇಳಲಿಲ್ಲ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಸಂಪಾಜೆ ಗ್ರಾಮ ಪಂಚಾಯತ್ನ ಮಾಜಿ ಉಪಾಧ್ಯಕ್ಷ ಎಸ್.ಕೆ ಹನೀಫ ಅವರನ್ನು ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯನ್ನಾಗಿ ಮಾಡಿರುವುದಕ್ಕೆ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ.
ಬ್ಲಾಕ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ಅವರು ಎಸ್.ಕೆ. ಹನೀಫ ಅವರನ್ನು ಬ್ಲಾಕ್ ಕಾಂಗ್ರೆಸ್ ಹುದ್ದೆಯಿಂದ ಕೈಬಿಡಬೇಕು ಎಂದು ಪತ್ರಬರೆಯಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ರಾಧಾಕೃಷ್ಣ ಬೊಳ್ಳೂರು ಅವರು ಸಂಪಾಜೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಈ ಬೇಡಿಕೆಗೆ ಸ್ಪಂದಿಸದಿದ್ದರೆ ಸಂಪಾಜೆ ಕಾಂಗ್ರೆಸ್ ವತಿಯಿಂದ ರಾಜ್ಯಾಧ್ಯಕ್ಷರಿಗೆ ಈ ವಿಷಯಗಳನ್ನು ತಿಳಿಸಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಮುಖರು ತಿಳಿಸಿದ್ದಾರೆ.ಸಭೆಯಲ್ಲಿ ವ್ಯಕ್ತವಾದ ಕಾರ್ಯಕರ್ತರ ಅಭಿಪ್ರಾಯವನ್ನು ಬ್ಲಾಕ್ ಅಧ್ಯಕ್ಷರಿಗೆ ಪತ್ರದ ಮೂಲಕ ಬರೆಯಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕ ಜಾನಿ.ಕೆ.ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಮುಖಂಡರಾದ ರಾಜು ನೆಲ್ಲಿಕುಮೇರಿ, ಪ್ರಮೀಳಾ ಪೆಲ್ತಡ್ಕ , ಸಂಪಾಜೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಲನ ಕೆ.ಆರ್ ,ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯೆ ಕಾಂತಿ.ಬಿ.ಎಸ್ , ಬೆಂಜಮಿನ್ ಡಿಸೋಜ , ಸಾಜೀದ್ ಗೂನಡ್ಕ ಮಾತನಾಡಿದರು.
ಸಭೆಯಲ್ಲಿ ,ಸೆಬಾಸ್ಟಿಯನ್ ನೆಲ್ಲಿಕುಮೇರಿ ,ರಕ್ಷಿತ್ ದೊಡ್ಡಡ್ಕ ,ಸತೀಶ್ ನೆಲ್ಲಿಕುಮೇರಿ,ನಫ್ಸಾನ್ ಪೆಲ್ತಡ್ಕ, ಯಾಹ್ಯಾ ದೊಡ್ಡಡ್ಕ ,ಸುಹೈಲ್ ಪೇರಡ್ಕ ,ಲುಕ್ಮಾನ್ ಪೇರಡ್ಕ ,ಕೆರೋಲಿನಾ ಕ್ರಾಸ್ತಾ ಫಿಲೋಮಿನಾ ಕ್ರಾಸ್ತಾ ,ಪ್ರೀತಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಭಾರ ಅಧ್ಯಕ್ಷ ವಸಂತ ಪೆಲ್ತಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರದಾನ ಕಾರ್ಯದರ್ಶಿ ಲೂಕಾಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು















