ಜೋಹಾನ್ಸ್ಬರ್ಗ್:ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮ ಅವರ ಸ್ಪೋಟಕ ಶತಕಗಳ ನೆರವಿನಿಂದ ದಾಖಲೆಯ ಮೊತ್ತ ಪೇರಿಸಿದೆ. ಭಾರತ 20 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 283 ರನ್ ಗಳಿಸಿದೆ. ಈ ಸರಣಿಯಲ್ಲಿ ಎರಡನೇ ಶತಕ ದಾಖಲಿಸಿದ ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮಾ ಅಕ್ಷರಷಃ
ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಅಬ್ಬರಿಸಿದರು. ಸಂಜು ಸ್ಯಾಮ್ಸನ್ ಕೇವಲ 56 ಎಸೆತಗಳಲ್ಲಿ 6 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 109 ರನ್ ಬಾರಿಸಿದರೆ, ತಿಲಕ್ ವರ್ಮ ಕೇವಲ 47 ಎಸೆತಗಳಲ್ಲಿ 9 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 120 ರನ್ ಗಳಿಡಿದರು. ಅಭಿಷೇಕ ವರ್ಮ 18 ಎಸೆತಗಳಲ್ಲಿ ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 36 ರನ್ ಬಾರಿಸಿದರು. ಸ್ಯಾಮ್ಸನ್ ಹಾಗೂ ಅಭಿಷೇಕ್ ವರ್ಮ ಮೊದಲ ವಿಕೆಟ್ಗೆ
35 ಎಸೆತಗಳಲ್ಲಿ 73 ರನ್ ಬಾರಿಸಿದರೆ, ಮುರಿಯದ ಎರಡನೇ ವಿಕೆಟ್ಗೆ ಸ್ಯಾಮ್ಸನ್ ಹಾಗೂ ತಿಲಕ್ ವರ್ಮ ಕೇವಲ 85 ಎಸೆತಗಳಲ್ಲಿ 210 ರನ್ ಗಳಿಸಿದರು. ಕ್ರೀಡಾಂಗಣದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್ಗಳ ಸುರಿಮಳೆ ಸುರಿಸಿದ ಭಾರತೀಯ ಬ್ಯಾಟರ್ಗಳು ಒಟ್ಟಾರೆ 23 ಸಿಕ್ಸರ್ ಹಾಗೂ 17 ಬೌಂಡರಿ ಸಿಡಿದರು. ಮೊದಲ ಪಂದ್ಯದಲ್ಲಿ ಸ್ಯಾಮ್ಸನ್ ಶತಕ ಸಿಡಿಸಿ ಸರಣಿಯಲ್ಲಿ ಎರಡನೇ ಶತಕ ದಾಖಲಿಸಿದರೆ, ತಿಲಕ್ ವರ್ಮಾ ಸತತ ಎರಡನೇ ಶತಕ ಸಿಡಿಸಿದರು.
ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದ್ದು, ದಕ್ಷಿಣ ಆಫ್ರಿಕಾದಲ್ಲಿ ಟಿ20 ಸರಣಿ ಗೆಲ್ಲುವ ಅವಕಾಶ ಟೀಂ ಇಂಡಿಯಾಕ್ಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ನಾಯಕನ ನಿರ್ಧರವನ್ನು ಸಮರ್ಥಿಸಿ ಬ್ಯಾಟರ್ಗಳು ಭರ್ಜರಿ ಇನ್ನೀಂಗ್ಸ್ ಕಟ್ಟಿದರು.