ಸುಳ್ಯ: ಸುಳ್ಯ ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ
ಸಂವಿಧಾನ ಜಾಗೃತಿ ಜಾಥಾವು ಭಾನುವಾರ ಪ್ರಯಾಣ ನಡೆಸಿತು. ಸುಳ್ಯ ತಾಲೂಕಿನ ಆಲೆಟ್ಟಿ, ಉಬರಡ್ಕ ಮಿತ್ತೂರು, ಐವರ್ನಾಡು, ಪೆರುವಾಜೆ, ಕೊಡಿಯಾಲ ಗ್ರಾಮ ಪಂಚಾಯತ್ಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು, ಸಾರ್ವಜನಿಕ ಸಭೆ, ಬೀದಿ ನಾಟಕ ಇತ್ಯಾದಿ ಕಾರ್ಯಕ್ರಮಗಳು ನಡೆಯಿತು.
previous post