ಸುಳ್ಯ: ಫೆ.17 ರಿಂದ ಫೆ.21 ರವರೆಗೆ ಸುಳ್ಯ ತಾಲೂಕಿನ ಹಲವೆಡೆ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಇದರ ಅಂಗವಾಗಿ ಫೆ. 20 ರಂದು ಪೂರ್ವಾಹ್ನ 11 ಗಂಟೆಗೆ ಸುಳ್ಯದ ಕೆವಿಜಿ ಪುರಭವನದಲ್ಲಿ ವಿವಿಧ ಸರಕಾರಿ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಖ್ಯಾತ ನ್ಯಾಯವಾದಿ, ಚಿಂತಕ ಸುಧೀರ್ ಕುಮಾರ್ ಮುರೋಳ್ಳಿ ಭಾಗವಹಿಸಿ, ಸಂವಿಧಾನದ ಅರಿವು ಮೂಡಿಸಲಿದ್ದಾರೆ ಎಂದು ತಹಶೀಲ್ದಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post