ಸುಳ್ಯ: ದ.ಕ. ಜಿಲ್ಲೆ, ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಜಾಲ್ಸೂರು ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥವು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ ನಡೆಯಿತು. ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ
ಸಾರ್ವಜನಿಕರಿಂದ ಕಾಲ್ನಡಿಗೆ , ಚಂಡೆ ಬ್ಯಾಂಡ್ ಸೆಟ್ಳೊಂದಿಗೆ ಹಾಗೂ ವಾಹನ ಮೆರವಣಿಗೆಯೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಎಲ್ಲಾ ಸದಸ್ಯರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪಂಚಾಯತ್ ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಸಿಬ್ಬಂದಿ ವರ್ಗ ಜಾಲ್ಸೂರು ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು
ಉಪಸ್ಥಿತರಿದ್ದರು. ಹಾಗೂ ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು, ಇತ್ಯಾದಿ ಕಾರ್ಯಕ್ರಮ ನಡೆಯಿತು.









