ಸುಳ್ಯ:ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಇದರ ಅಧೀನದಲ್ಲಿ ಬರುವ 14 ಜಮಾಅತ್ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೊಯ ತಂಙಳ್ ಅವರನ್ನು ನೇಮಕ ಮಾಡಲಾಗಿದ್ದು ಅವರ ಖಾಝಿ ಸ್ವೀಕಾರ ಸಮಾರಂಭ ಆಗಸ್ಟ್ 4ರಂದು ಸಂಜೆ 4ರಿಂದ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು
ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಪದಾಧಿಕಾರಿಗಳು ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ ಸಮಾರಂಭದ ಉದ್ಘಾಟನೆಯನ್ನು ಎನ್.ಪಿ.ಎಂ ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಯುಕ್ತ ಜಮಾಅತ್ನ ಅಧ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿ ವಹಿಸಲಿದ್ದಾರೆ. ಮುಖ್ಯ ಪ್ರಭಾಷಣಕಾರರಾಗಿ ಖ್ಯಾತ ವಾಗ್ಮಿ ಅಬ್ದುಲ್ ಸಲಾಂ ಬಾಖವಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ

ಅಸ್ಸಯ್ಯದ್ ಪೂಕೋಯ ತಂಙಳ್ ಪುತ್ತೂರು, ಶೈಖುನಾ ಎಂ.ಟಿ. ಅಬ್ದುಲ್ಲ ಮುಸ್ಲಿಯಾರ್, ಕೆ.ಎ. ಉಮ್ಮರ್ ಮುಸ್ಲಿಯಾರ್, ಉಮ್ಮರ್ ಪೈಝಿ ಮುಕಂ, ಕೊಡಗು ಜಿಲ್ಲಾ ಖಾಝಿ ಅಬ್ದುಲ್ಲ ಫೈಝಿ, ಮುಶಾವರ ಸದಸ್ಯರಾದ ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ ಉಸ್ಮಾನ್ ಫೈಝಿ ತೊಡಾರ್, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ತಾಲೂಕಿನ 14 ಜಮಾಅತ್ ಗಳ ಅಧ್ಯಕ್ಷರುಗಳು, ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಅಶ್ರಫ್ ಗುಂಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಯುಕ್ತ ಜಮಾಅತ್ ಕೋಶಾಧಿಕಾರಿ
ಹಮೀದ್ ಹಾಜಿ, ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕತ್ತರ್, ಸಂಘಟನಾ ಕಾರ್ಯದರ್ಶಿ ಜಮಾಲ್ ಬೆಳ್ಳಾರೆ, ಸುಳ್ಯ ತಾಲೂಕು ಮದ್ರಸಾ ಮೆನೇಜ್ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್ ಸಂಪಾಜೆ, ಕಾರ್ಯದರ್ಶಿ ಯು.ಪಿ.ಬಶೀರ್ ಬೆಳ್ಳಾರೆ, ಎಸ್ಕೆಎಸ್ಎಸ್ಎಫ್ ವಲಯಾಧ್ಯಕ್ಷ ಅಬೂಬಕ್ಕರ್ ಪೂಪಿ, ಅರಂತೋಡು ಜಮಾಅತ್ ಕಾರ್ಯದರ್ಶಿ ಅಬೂಬಕ್ಕರ್ ಪಾರೆಕ್ಕಲ್, ಅನ್ವರುಲ್ಹುದಾ ಯಂಗ್ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಅಮೀರ್ ಕುಕ್ಕುಂಬಳ ಉಪಸ್ಥಿತರಿದ್ದರು.












