ಸುಳ್ಯ:ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯು ದೇಶಾದ್ಯಂತ ಪಕ್ಷವನ್ನು ತಳಮಟ್ಟದಿಂದ ಪುನಃ ನಿರ್ಮಿಸಲು ಮತ್ತು ಸಂಘಟನಾತ್ಮಕವಾಗಿ ಗಟ್ಟಿಗೊಳಿಸುವ ದೃಷ್ಟಿಯಿಂದ ‘ಸಂಘಟನ್ ಸೃಜನ್ ಅಭಿಯಾನ್’ ಎಂಬ ಹೊಸ ಕಾರ್ಯಕ್ರಮವನ್ನು
ಹಮ್ಮಿಕೊಂಡಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಫಾರಸ್ಸು ಮೇರೆಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ ಅವರನ್ನು ಅಭಿಯಾನದ ಚಿಕ್ಕಮಗಳೂರು ಜಿಲ್ಲಾ ಕೆಪಿಸಿಸಿ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶಮಾಡಲಾಗಿದೆ.
ಜು. 24ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಸಂಘಟನ್ ಸೃಜನ್ ಅಭಿಯಾನ್ ಇದರ ಪ್ರಥಮ ಸಭೆ ನಡೆಯಲಿದೆ.








