

ನೆಟ್ಟಣ:ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ ಬೆಳ್ತಂಗಡಿ ನೇತೃತ್ವದಲ್ಲಿ ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ ಹಾಗೂ ಭಾಗ್ಯೋದಯ ಮಹಾಸಂಘ ನೆಟ್ಟಣ ಇವುಗಳ ಸಹಭಾಗಿತ್ವದಲ್ಲಿ ಮಹಿಳಾ ಸಂಘಗಳ ಬಲವರ್ಧನೆಯ ನಿಟ್ಟಿನಲ್ಲಿ ಸಂಘೋತ್ಸವ- 2022 ಎಂಬ ವಿನೂತನ ಕಾರ್ಯಕ್ರಮವನ್ನು ನೆಟ್ಟಣ ಸಂತ ಮೇರೀಸ್ ಚರ್ಚ್ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೇಟ್ ನಿರ್ದೇಶಕರಾದ ಫಾ. ಜೋಸೆಫ್ ಚೀರನ್ ರವರು ದೀಪ
ಬೆಳಗಿಸಿ ಈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ನೆಟ್ಟಣ ಭಾಗ್ಯೋದಯ ಮಹಾಸಂಘದ ಅಧ್ಯಕ್ಷೆ ಕುಂಞಿಲಕ್ಷ್ಮೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಉದ್ಘಾಟನಾ ಕಾರ್ಯಕ್ರಮದ ಬಳಿಕ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಅಪರಾಹ್ನದ ನಂತರ ವಿವಿಧ ಹೊರಾಂಗಣ ಕ್ರೀಡೆಗಳನ್ನು ಆಯೋಜಿಸಿಲಾಯಿತು.
ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು. ಸಂತ ಸೆಬಾಸ್ಟಿಯನ್ ಚರ್ಚಿನ ಧರ್ಮಗುರುಗಳಾದ ಫಾ. ಸನೀಶ್ ಪುದುಪರಂಬಿಲ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸ್ಥಳೀಯ ನಿರ್ದೇಶಕರುಗಳು, ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗ, ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿನಿ ಪ್ರಕೃತಿ ಸಿ.ವಿ, ಸ್ವಯಂ ಸೇವಕರಾಗಿ ದುಡಿದು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.