ಸುಳ್ಯ: ಸುಳ್ಯ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಮಂಜೂರುಗೊಂಡ ಪಶು ಸಂಜೀವಿನಿ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಅ.31 ರಂದು ಸುಳ್ಯ ಪಶು ಸಂಗೋಪನಾ ಆಸ್ಪತ್ರೆಯ ಆವರಣದಲ್ಲಿ ನಡೆಯಿತು. ಬಂದರು, ಮೀನಿಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಪಶು ಸಂಜೀವಿನಿ ವಾಹನ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ನ.ಪಂ.ಸದಸ್ಯರಾದ ಬಾಲಕೃಷ್ಣ ಭಟ್, ಬಾಲಕೃಷ್ಣ ರೈ, ರೋಹಿತ್ ಕೊಯಿಂಗೋಡಿ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಡಾ.ನಿತಿನ್ ಪ್ರಭು, ವೆಂಕಟ್ ವಳಲಂಬೆ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.