ಪಂಜ: ವಲಯ ಅರಣ್ಯ ಅಧಿಕಾರಿಗಳಾಗಿ ಭಡ್ತಿಗೊಂಡ ಸಂತೋಷ್ ಕುಮಾರ್ ರೈಯವರಿಗೆ ಪಂಜ ಪರಿಸರದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಾರ್ಪಣೆ ಹಾಗೂ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಜೂ.1 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.ಪಂಜ ವಲಯ ಅರಣ್ಯ ಇಲಾಖೆಯಲ್ಲಿ ಉಪವಲಯ ಅರಣ್ಯ ಅಧಿಕಾರಿಯಾಗಿ ಕರ್ತವ್ಯದಲ್ಲಿದ್ದ ಸಂತೋಷ್ ಕುಮಾರ್ ರೈ ಅವರು ವಲಯ ಅರಣ್ಯ ಅಧಿಕಾರಿಗಳಾಗಿ ಭಡ್ತಿಗೊಂಡು
ಮಂಗಳೂರು ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆ ಗೊಂಡಿರುವ ಹಿನ್ನಲೆಯಲ್ಲಿ ಅವರಿಗೆ ಪಂಜ ಪರಿಸರದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಾರ್ಪಣೆ ಹಾಗೂ ಸಾರ್ವಜನಿಕ ಸನ್ಮಾನ ಏರ್ಪಡಿಸಿಸಲಾಗಿತ್ತು.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಜನರು ಯಾವತ್ತು ಗೌರವ, ಪ್ರೋತ್ಸಾಹ ನೀಡುತ್ತಾರೆ. ಜನಸ್ನೇಹಿ ಅಧಿಕಾರಿಗಳು ಬಂದಾಗ ಮುಂದೆಯೂ ಜನರು ಬೆಂಬಲ, ಗೌರವ ನೀಡುತ್ತಾರೆ ಎಂದರು.

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ,
ದೇವಳದ ಗೌರವ ಸಲಹೆಗಾರ ಆನಂದ ಗೌಡ ಕಂಬಳ ಅಭಿನಂದನಾ ಭಾಷಣ ಮಾಡಿದರು.ಗೌರವಾರ್ಪಣೆ ಸ್ವೀಕರಿಸಿದ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ರೈ ಮಾತನಾಡಿ ಕೃತಜ್ಞತೆ ಸಲ್ಲಿಸಿದರು.
ಮುಖ್ಯ ಅತಿಥಿಗಳಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ದ, ನಿಡ್ವಾಳ ಶ್ರೀ ಮಹಾವಿಷ್ಣು ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೇಮಿರಾಜ್ ಪಲ್ಲೋಡಿ, ಅಳ್ಪೆ ಚಿಂಗಾಣಿಗುಡ್ಡೆ ಶ್ರೀ ಉಳ್ಳಾಕುಲು ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕುಸುಮಾಧರ ಕರಿಮಜಲು, ವನಿತಾ ಸಮಾಜ ಅಧ್ಯಕ್ಷೆ ಸುಮಾ ಕುದ್ವ, ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪಂಜ ವಲಯ ಅರಣ್ಯ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೊಳ್ಳಾಜೆ, ಪಂಜ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷ ನಾಗೇಶ್ ಕಿನ್ನಿಕುಮೇರಿ, ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಿತೇಶ್ ಪಂಜದಬೈಲು, ನಿಕಟ ಪೂರ್ವಾಧ್ಯಕ್ಷ ಪವನ್ ಪಲ್ಲತ್ತಡ್ಕ,ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಚಣ್ಣ ಕೆರೆಮೂಲೆ, ಶ್ರೀ ಶಾರದಾಂಬಾ ಭಜನಾ ಮಂಡಳಿ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ಪಂಜ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ ಸಂಪ್ಯಾಡಿ, ಪಲ್ಲೋಡಿ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಅಧ್ಯಕ್ಷೆ ನಿರ್ಮಲ ಕೆ.ಎಸ್.ಪಲ್ಲೋಡಿ, ಪಂಜ ಪರಿಸರದ ಆರಾಧನಾ ಸಮಿತಿ ಖಜಾಂಜಿ ಆನಂದ ಗೌಡ ಜಳಕದಹೊಳೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂತೋಷ್ ಕುಮಾರ್ ರೈ ರವರ ಪತ್ನಿ ವಿತಿಶ್ರೀ ರೈ, ಮಗಳು ಸಾನ್ವಿ ಎಸ್ ರೈ, ಮಗ ತನಿಶ್ ರೈ ಅವರನ್ನು ಸನ್ಮಾನಿಸಲಾಯಿತು. 20 ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಾರ್ಪಣೆ ನಡೆಯಿತು.
ಹೇಮಲತಾ ಜನಾರ್ದನ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಪವಿತ್ರ ಮಲ್ಲೆಟ್ಟಿ ನಿರೂಪಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಸಂತೋಷ್ ರೈ ಪಲ್ಲತ್ತಡ್ಕ ವಂದಿಸಿದರು.