ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಸಂರಕ್ಷಣೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿಯ ನಿವೃತ್ತ ಚಿತ್ರಕಲಾ ಶಿಕ್ಷಕರಾದ ಉಮೇಶ್ ಶಾಂತಿನಗರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಪರಿಸರ ಸಂರಕ್ಷಣೆಯ
ಅಗತ್ಯತೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ದ ಬಗ್ಗೆ ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ತಾಪಮಾನವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಕಸಿ ಕಟ್ಟುವ ವಿಧಾನದ ಬಗ್ಗೆ ವಿಶೇಷ ಪ್ರಾತ್ಯಕ್ಷತೆಯನ್ನು ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ.ಕೆ ವಹಿಸಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಕಲಾ.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂಕಲ್ಪ ವಿಧಿಯನ್ನು ಬೋಧಿಸಿದರು. ಇಕೋ ಕ್ಲಬ್ ಸಂಚಾಲಕಿ ಕೃತಿ ಪಿ ಎಸ್ ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕ ದಯಾನಂದ ಓ.ಡಿ ವಂದಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಬೋಧಕ, ಭೋದಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.