ಸುಳ್ಯ: ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಬೆಂಗಳೂರಿನ ವಿದ್ಯಾಂತ್ ಅಕಾಡೆಮಿಯವರು ನಡೆಸುವ ಸಿಇಟಿ ಮತ್ತು ನೀಟ್ ಕ್ರ್ಯಾಶ್ ಕೋರ್ಸ್ ಪ್ರಾರಂಭಗೊಂಡಿತು. ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ
ಮುಖ್ಯಸ್ಥರಾದ ಪ್ರೊಫೆಸರ್ ಚಂದ್ರಶೇಖರ್ ದೀಪ ಬೆಳಗಿಸಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಬಂಗಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ.ಕೆ. ಸ್ವಾಗತಿಸಿ ಪ್ರಸ್ತಾವನೆಗೈದರು. ವೇದಿಕೆಯಲ್ಲಿ ದ ಕ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ.ರೇವತಿ ನಂದನ್, ನಿರ್ದೇಶಕರಾದ ಡಾ.ಸಾಯಿಗೀತಾ ಶುಭ ಹಾರೈಸಿದರು. ವಿದ್ಯಾಂತ್ ಅಕಾಡೆಮಿಯ ಸಿಇಟಿ ತರಬೇತುದಾರರಾದ ವಿನಯ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕರಾದ ದಯಾನಂದ ಓ. ಡಿ ವಂದಿಸಿದರು. ಹಿರಿಯ ಉಪನ್ಯಾಸಕರಾದ ಸ್ವರ್ಣಕಲಾ. ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.







