ಸುಳ್ಯ:2023 ಮತ್ತು 2024ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪ್ರೆಸ್ಟೀಜ್ ಪದವಿ ಪೂರ್ವ ಕಾಲೇಜು, ಜಪ್ಪಿನಮೊಗರು, ಮಂಗಳೂರು ಇಲ್ಲಿ ನಡೆಯಿತು.ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು
ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. 2023 ಮತ್ತು 2024ರಲ್ಲಿ ಶೇಕಡ 100 ಫಲಿತಾಂಶವನ್ನು ಪಡೆದ ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಸ್ವರ್ಣಕಲಾ ಎ.ಎಸ್ ಅವರು ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ ಅವರಿಂದ ಅಭಿನಂದನಾ ಫಲಕವನ್ನು ಸ್ವೀಕರಿಸಿದರು.

2025 ರ ವಾರ್ಷಿಕ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಕಲಾವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು. ಗೌರವ ಪ್ರಶಸ್ತಿಯನ್ನು ಪಡೆದ ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರನ್ನು ಆಡಳಿತ ಮಂಡಳಿಯಾದ ದಕ್ಷಿಣ ಕನ್ನಡ ಜಿಲ್ಲಾ ಗೌಡ ವಿದ್ಯಾ ಸಂಘ ಇದರ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಮತ್ತು ಆಡಳಿತ ಮಂಡಳಿ ನಿರ್ದೇಶಕರುಗಳು ಅಭಿನಂದಿಸಿರುತ್ತಾರೆ.














