ಸುಳ್ಯ:ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಸ್ವಾತಂತ್ರ್ಯೋತ್ಸವವು ವಿಜೃಂಭಣೆಯಿಂದ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿದರು.ಪ್ರಧಾನ ಕಾರ್ಯದರ್ಶಿ ಡಾ.ರೇವತಿ ನಂದನ್ ಉಪಸ್ಥಿತರಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಯಾಮಣಿ.ಕೆ ಸ್ವಾಗತಿಸಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಭಾರತಿ ಪಿ ವಂದಿಸಿದರು. ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.