ಸುಳ್ಯ: ಸುಳ್ಯ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು ಸ್ವಾತಂತ್ರಕ್ಕಾಗಿ

ಹೋರಾಡಿದ ನಾಯಕರುಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಂದೆ ಬಲಿಷ್ಠ ನಾಯಕರುಗಳಾಗಿ ದೇಶವನ್ನು ಸದೃಢ ಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ದಯಮಣಿ.ಕೆ ಸ್ವಾಗತಿಸಿ, ಮುಖ್ಯೋಪಾಧ್ಯಾಯನಿ ಭಾರತಿ. ಪಿ ವಂದಿಸಿದರು. ಸಂಸ್ಥೆಯ ಎಲ್ಲಾ ಬೋಧಕ, ಬೋಧಕೇತರ, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.





