ಸುಳ್ಯ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸ್ವಾತಂತ್ರದ ಮಹತ್ವ ಮತ್ತು
ಪ್ರಜಾಪ್ರಭುತ್ವದಿಂದಾಗಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಮುಂದುವರಿದು ಈಗ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಹೇಳಿದರು. ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ರವರು ಉಪಸ್ಥಿತರಿದ್ದರು .ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಭಾರತಿ ಸ್ವಾಗತಿಸಿ, ಪದವಿ ಪೂರ್ವ ಕಾಲೇಜು ವಿಭಾಗದ ಪ್ರಾಂಶುಪಾಲರಾದ ದಯಾಮಣಿ .ಕೆ ವಂದಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.