ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಮಹಿಳಾ ವಿಭಾಗದಲ್ಲಿ ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ
ಆಯ್ಕೆ ಆಗಿರುತ್ತದೆ. ಈ ಪಂದ್ಯಾಟದ ಉತ್ತಮ ದಾಳಿಗಾರ್ತಿಯಾಗಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ರಶ್ಮಿ. ಪಿ ಮತ್ತು ಸರ್ವಾಂಗೀಣ ಆಟಗಾರ್ತಿಯಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೃತಿ.ಎಲ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಾಲಚಂದ್ರ ಮತ್ತು ಕುಮಾರಿ ವಿಸ್ಮಿತ ಮರ್ಕಂಜ ರವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು. ಇಂಗ್ಲಿಷ್ ಉಪನ್ಯಾಸಕಿ ಸ್ವಾತಿ. ಎಂ ರವರು ತಂಡದ ವ್ಯವಸ್ಥಾಪಕರಾಗಿದ್ದರು. ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ಅಭಿನಂದಿಸಿರುತ್ತಾರೆ