ಸುಳ್ಯ: ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ಆಡಳಿತ ಸಮಿತಿ, ವಕೀಲರ ಸಂಘ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ,ಸುದ್ದಿ ಸಮೂಹ ಮಾಧ್ಯಮ, ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ‘ಕಾನೂನು ಅರಿವು ಕಾರ್ಯಕ್ರಮ’

ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. . ಸುಳ್ಯದ ಸಿವಿಲ್ ನ್ಯಾಯಾಧೀಶರಾದ ಅರ್ಪಿತಾ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ರಾಮಚಂದ್ರ ಶ್ರೀಪಾದ ಹೆಗಡೆ ಅವರು ‘ಬಾಲ್ಯ ವಿವಾಹ ತಡೆ ಕಾಯ್ದೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ದಕ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ರೇವತಿ ನಂದನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ., ಸಹಾಯಕ ಅಭಿಯೋಜಕರಾದ ಆರೋನ್. ಡಿಸೋಜ, ವಕೀಲರಾದ ಲೋಲಾಕ್ಷಿ, ಪ್ರತಿಭಾ ಜ್ಯೋತಿ , ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ. ಉಪಸ್ಥಿತರಿದ್ದರು. ಅಮೂಲ್ಯ ಆಶಿಕ ಚಿಂತನ ಪ್ರಾರ್ಥಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ ಕೆ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಕಲ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.