ಸುಳ್ಯ:ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸುಳ್ಯದ ನ್ಯಾಯಾಧೀಶರು ಹಾಗೂ ತಾಲೂಕು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಕು.ಅರ್ಪಿತಾ ಅವರು ದೀಪ ಬೆಳಗಿಸಿ ಉದ್ಘಾಟಿಸಿ
ವಿದ್ಯಾರ್ಥಿನಿಯರಿಗೆ ಕಾನೂನು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರಾದ ಜಗದೀಶ ಹುದೇರಿ ಭಾಗವಹಿಸಿ ‘ಪೋಕ್ಸೊ ಕಾಯಿದೆ ಮತ್ತು ಮಹಿಳೆಯರ ಹಕ್ಕುಗಳು ಕುರಿತು’ಉಪನ್ಯಾಸ ನೀಡಿದರು. ಮುಖ್ಯ ಅತಿಥಿಯಾಗಿ ವಕೀಲರ ಸಂಘದ ಅಧ್ಯಕ್ಷ ನಾರಾಯಣ. ಕೆ, ಸಹಾಯಕ ಸರ್ಕಾರಿ ಅಭಿಯೋಜಕರಾದ ಆರೋನ ಡಿ ‘ಸೋಜಾ, ಪ್ಯಾನಲ್ ವಕೀಲರಾದ ಕು ಲೋಲಾಕ್ಷಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ.ಎ. ಎಸ್ ಸ್ವಾಗತಿಸಿ, ಉಪನ್ಯಾಸಕ ಬಾಲಕೃಷ್ಣ.ಕೆ ವಂದಿಸಿದರು. ಉಪನ್ಯಾಸಕ ಪ್ರಸನ್ನ.ಎನ್. ಎಚ್. ಕಾರ್ಯಕ್ರಮ ನಿರೂಪಿಸಿದರು.