ಸುಳ್ಯ: ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜಸೇವಾ ಸಂಘದ ವತಿಯಿಂದ ಸುಳ್ಯದ ಶ್ರೀ ಶಾರದಾ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಕೆ .ವಿ. ಜಿ ಸಾಧನೆ ಮತ್ತು ಸಂಸ್ಮರಣೆ ಕಾರ್ಯಕ್ರಮ ನಡೆಯಿತು. ಕೆ.ವಿ.ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಉದ್ಘಾಟಿಸಲಾಯಿತು. ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ
ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಕಲಾ ಮಾತನಾಡಿ ಕೆ .ವಿ. ಜಿ ಅವರ ಸಾಧನೆಗಳನ್ನು ಸ್ಮರಿಸಿದರು. ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಮತ್ತು ಅವಿಸ್ಮರಣೀಯವಾದದ್ದು ಎಂದು ತಿಳಿಸಿದರು.
ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ರೇವತಿ ನಂದನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿವೃತ್ತ ಬಿಡಿಒ ಮತ್ತು ಕಾರ್ಯಕ್ರಮದ ನಿರ್ದೇಶಕರಾದ ಎಂ. ಮೀನಾಕ್ಷಿ ಗೌಡ ಮಾತನಾಡಿದರು.
ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ ಮತ್ತು ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಭಾರತಿ. ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು
ವಿ.ಜಿ ಅವರ ಸಾಧನೆಗಳು ಎಂಬ ವಿಚಾರವಾಗಿ ವಿದ್ಯಾರ್ಥಿನಿಯರಿಗೆ ಏರ್ಪಡಿಸಿದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಖುಷಿ ವೈ.ಟಿ ಮತ್ತು ದ್ವಿತೀಯ ಸ್ಥಾನವನ್ನಿ ದೀಕ್ಷಿತಾ.ಕೆ.ಆರ್ ಪಡೆದರು.
ಕೆ.ವಿ.ಜಿ ಸಾಧನ ಮತ್ತು ಸಂಸ್ಮರಣೆ ಕಾರ್ಯಕ್ರಮ ಅಂಗವಾಗಿ ಶಾಲಾ ಗ್ರಂಥಾಲಯಕ್ಕೆ ನೀಡಿದ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ
ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿನಿಯರು. ಉಪಸ್ಥಿತರಿದ್ದರು. ಸಮಾಜ ವಿಜ್ಞಾನ ಶಿಕ್ಷಕರಾದ ಸುನಿತಾ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಭಾವತಿ ಎಸ್. ವಂದಿಸಿದರು.












