ಸುಳ್ಯ:ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶನದಂತೆ, ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯಿದೆ ಮತ್ತು
ಪೋಕ್ಸೋ ಕಾಯಿದೆ ಬಗ್ಗೆ ಸುಳ್ಯದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಜಾ.ಬಿ.ಅವರು ಮಾಹಿತಿ ನೀಡಿದರು. ಬಾಲ್ಯ ವಿವಾಹದ ದುಷ್ಪರಿಣಾಮಗಳು ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲೆ ದಯಾಮಣಿ. ಕೆ. ಸ್ವಾಗತಿಸಿದರು. ಉಪನ್ಯಾಸಕ ಬಾಲಕೃಷ್ಣ.ಕೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.