ಸುಳ್ಯ:ಸುಳ್ಯ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಾರಂಭೋತ್ಸವ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ
ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಮ್ಮ ಸಂಸ್ಥೆಯಲ್ಲಿ ಮಧ್ಯಮ ಮತ್ತು ಬಡ ವರ್ಗದ ವಿದ್ಯಾರ್ಥಿಗಳು ಉತ್ತಮ
ವಿದ್ಯಾಭ್ಯಾಸವನ್ನು ಪಡೆದು ಪ್ರತಿ ವರ್ಷ ಉತ್ತಮ ಫಲಿತಾಂಶವನ್ನು ತರುತ್ತಾರೆ. ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಸಿಗುವ ಉತ್ತಮ ಶಿಕ್ಷಣವನ್ನು ಪಡೆದುಕೊಂಡು ಜೀವನದಲ್ಲಿ ಯಶಸ್ಸನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ .ಕೆ.ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಶಿಸ್ತು ಮತ್ತು ನಿಯಮಗಳನ್ನು ತಿಳಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ. ಎನ್ ಸ್ವಾಗತಿಸಿ, ಸಮಾಜ ಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ.ಕೆ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಕಲಾ. ಎ.ಎಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳ ಹೆತ್ತವರು, ಪೋಷಕರು ವಿದ್ಯಾರ್ಥಿ ಮತ್ತುವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.