ಸುಳ್ಯ:ಸುಳ್ಯದ ಶ್ರೀ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದ ಕ ಗೌಡ ವಿದ್ಯಾ ಸಂಘದ ನಿರ್ದೇಶಕಿ ಡಾ ಸಾಯಿ ಗೀತಾ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣದ
ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಹಾಗೆಯೇ ಪ್ರತಿ ವಿದ್ಯಾರ್ಥಿಗೂ ಪೆನ್ನು ಮತ್ತು ಪುಸ್ತಕವನ್ನು ವೆಲ್ಕಮ್ ಗಿಫ್ಟ್ ಆಗಿ ನೀಡಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಸ್ವರ್ಣಕಲಾ ಎ ಎಸ್. ವಿದ್ಯಾರ್ಥಿಗಳಿಗೆ ಕಾಲೇಜಿನ ನೀತಿ ನಿಯಮಗಳು, ಶೈಕ್ಷಣಿಕ ಚಟುವಟಿಕೆಗಳು, ಶಿಕ್ಷಣ ಸಂಬಂಧೀ ಚಟುವಟಿಕೆಗಳು, ಪರೀಕ್ಷಾ ವಿಧಾನ ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇರುವ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ಇತಿಹಾಸ ಪ್ರಾಧ್ಯಾಪಕ ಪ್ರಸನ್ನ ಎನ್ ಹೆಚ್ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ್ ಎನ್, ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಮೇಘ ಬಿ.ಜಿ.ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು














