ಸುಳ್ಯ:ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ನಡೆಯಿತು.ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ .ಕೆ ಪ್ರಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ತಂದೆ ತಾಯಿಗಳ
ಮೇಲಿರುವ ಜವಾಬ್ದಾರಿಯನ್ನು ತಿಳಿಸಿದರು. ಪೋಷಕರ ಪರವಾಗಿ ಕಳೆದ ಸಾಲಿನ ಪೋಷಕರ ಸಂಘದ ಅಧ್ಯಕ್ಷ ದಿವಿಶ್ ಕುಮಾರ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಾಂಗಾಯ ವಹಿಸಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಮುಂದೆ ಸಮಾಜದಲ್ಲಿ ಒಳ್ಳೆಯ ಸ್ಥಾನವನ್ನು ಗಳಿಸುವುದಕ್ಕೆ ಪೋಷಕರ ಪಾತ್ರದ ಪ್ರಾಮುಖ್ಯತೆಯನ್ನು ವಿವರಿಸಿದರು. ಉಪನ್ಯಾಸಕ ಬಾಲಕೃಷ್ಣ. ಕೆ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕಿ ತಾರಕಾಂತಿ ಕಾರ್ಯಕ್ರಮವನ್ನು ನಿರೂಪಿಸಿದರು.