ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ

ಪೋಷಕರ ಪಾತ್ರವನ್ನು ತಿಳಿಸಿ, ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು. ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ ಕೆ ಪ್ರಾಸ್ತಾವಿಕವಾಗು ಮಾತನಾಡಿದರು. ಉಪನ್ಯಾಸಕಿ ದೀಪ್ತಿ ಸ್ವಾಗತಿಸಿ, ಉಪನ್ಯಾಸಕ ಪ್ರಸನ್ನ ಎನ್. ಎಚ್ ವಂದಿಸಿದರು. ಉಪನ್ಯಾಸಕಿ ಸ್ವಾತಿ.ಎಂ ಕಾರ್ಯಕ್ರಮ ನಿರೂಪಿಸಿದರು.












