ಸುಳ್ಯ:ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಕಾಳಿಕಾ ಪ್ರಸಾದ್ ಮುಂಡೋಡಿ ವಹಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯನಿ ಮತ್ತು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ
ನಿರ್ದೇಶಕಿ ತಂಗಮ್ಮ ಕೆ.ಎಸ್. ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾಂಪ್ರದಾಯಿಕ ಉಡುಗೆ ತೊಡುಗೆಯನ್ನು ಧರಿಸಿ ಕಾರ್ಯಕ್ರಮಕ್ಕೆ ಕಳೆಯನ್ನು ನೀಡಿದರು. ವೇದಿಕೆಯಲ್ಲಿ ಪ್ರಾಂಶುಪಾಲರಾದಯ ದಯಾಮಣಿ ಕೆ ಮತ್ತು ಮುಖ್ಯೋಪಾಧ್ಯಾಯನಿ ಭಾರತಿ ಪಿ ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಶಿಕ್ಷಕಿ ಪ್ರಭಾವತಿ ಮತ್ತು ಕನ್ನಡ ಭಾಷಾ ಶಿಕ್ಷಕಿ ಗಾಯತ್ರಿ ನೆರವೇರಿಸಿದರು. ಪಿಯುಸಿ ವಿಭಾಗದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಭೌತಶಾಸ್ತ್ರ ಉಪನ್ಯಾಸಕಿ ಕೃತಿ. ಪಿ.ಎಸ್ ನೆರವೇರಿಸಿದರು. ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್. ಎಚ್ ಸ್ವಾಗತಿಸಿ, ಸಮಾಜ ವಿಜ್ಞಾನ ಸಹ ಶಿಕ್ಷಕಿ ಸುನಿತಾ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸ್ವಾತಿ ಎಂ ಮತ್ತು ರಸಾಯನಶಾಸ್ತ್ರ ಉಪನ್ಯಾಸಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.





