ಸುಳ್ಯ:ಆರೋಗ್ಯ ಇಲಾಖೆ ಮತ್ತು ಸುಳ್ಯದ ಶ್ರೀ ಶಾರದ ಮಹಿಳಾ ಪದವಿಪೂರ್ವ ಕಾಲೇಜು, ಇವುಗಳ ಜಂಟಿ ಆಶ್ರಯದಲ್ಲಿ ‘ಮೈತ್ರಿ ಮುಟ್ಟಿನ ಕಪ್ ‘ವಿತರಣೆ ಮತ್ತು ಮಾಹಿತಿ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಅವರು ಮುಟ್ಟಿನ ಕಪ್ ಬಳಕೆಯ ಬಗ್ಗೆ ಪ್ರಾತ್ಯಕ್ಷಕತೆಯೊಂದಿಗೆ ಮಾಹಿತಿ ನೀಡಿದರು. ದ. ಕ .ಗೌಡ ವಿದ್ಯಾ ಸಂಘದ

ನಿರ್ದೇಶಕರಾದ ಡಾ. ಸಾಯಿ ಗೀತ ಜ್ಞಾನೇಶ್ ಅವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನೈರ್ಮಲ್ಯದ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ. ಕ. ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ವಹಿಸಿದ್ದರು. ಆರೋಗ್ಯ ಇಲಾಖೆ ಅಧಿಕಾರಿಗಳಾದ ಕುಮಾರಿ ಸೌಮ್ಯ, ರಚನಾ ಡಿ.ಎಲ್ ಮತ್ತು ಕ್ರಿಸ್ಟಲ್ ರವರು ಉಪಸ್ಥಿತರಿದ್ಧು ಕಾರ್ಯಕ್ರಮಕ್ಕೆ ಸಹಕರಿಸಿದರು.ವಿದ್ಯಾರ್ಥಿನಿಯರಿಗೆ ಉಚಿತ ಕಪ್ ವಿತರಣೆ ಮಾಡಲಾಯಿತು.ಸಂಸ್ಥೆಯ ಪ್ರಾಂಶುಪಾಲರಾದ ದಯಾಮಣಿ .ಕೆ. ಸ್ವಾಗತಿಸಿ, ಉಪನ್ಯಾಸಕಿ ಸ್ವರ್ಣಕಲಾ ಕಾರ್ಯಕ್ರಮ ನಿರ್ವಹಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಹೆತ್ತವರು, ಉಪನ್ಯಾಸಕ ವೃಂದದದವರು ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದರು.









