ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ದ. ಕ. ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ಜ್ಯೋತಿ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿದ್ದ
ಎಎಸ್ಐ ಸೀನಪ್ಪ ಗೌಡ ಕ್ರೀಡಾ ಜ್ಯೋತಿ ಕುಂಡವನ್ನು ಪ್ರಜ್ವಲಿಸಿ ಶುಭ ಹಾರೈಸಿದರು.ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಶುಭ ಹಾರೈಸಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಸ್ವರ್ಣಕಲಾ ಎಸ್ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಭಾರತಿ ಪಿ ವಂದಿಸಿದರು. ಪದವಿಪೂರ್ವ ವಿಭಾಗದ ಪೋಷಕ ಶಿಕ್ಷಕ ಸಂಘದ ಅಧ್ಯಕ್ಷ ಭವಾನಿ ಕುಮಾರ್ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಮಹೇಶ್ ಉಪಸ್ಥಿತರಿದ್ದರು. ಅರ್ಪಣಾ ವಂದಿಸಿದರು.ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದರು.ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಎಲ್ಲಾ ಉಪನ್ಯಾಸಕರು ಅಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
















