ಸುಳ್ಯ: ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.2ರಂದು ಅಮೃತ ಭವನದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ ನಾಯಕ್ ಕಾಲೇಜಿನ ವಿವಿಧ ಸಂಘಗಳನ್ನು
ಉದ್ಘಾಟಿಸಿ ಮಾತನಾಡಿದರು. ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅಧ್ಯಕ್ಷತೆ ವಹಿಸಿ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ದ.ಕ.ಗೌಡ ವಿದ್ಯಾ ಸಂಘದ ಖಜಾಂಜಿ ಮಾಧವ ಗೌಡ, ನಿರ್ದೇಶಕಿ ಡಾ.ಸಾಯಿಗೀತಾ ಜ್ಞಾನೇಶ್, ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ, ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಭಾರತಿ.ಪಿ. ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ತಾಲೂಕಿನಲ್ಲಿ

ಪ್ರಥಮ ಸ್ಥಾನಿಯಾದ ಹರ್ಷಿತಾ ಸೇರಿ ಪಿಯುಸಿ ಹಾಗೂ ಎಸ್ಎಸ್ಎಲ್ಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ, ಸ್ವಾಗತಿಸಿ, ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಭಾರತಿ.ಪಿ. ವಂದಿಸಿದರು.
ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಭಾವತಿ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ರಾಜ್ಯ ಶಾಸ್ತ್ರ ಉಪನ್ಯಾಸಕ ದಾಮೋದರ ಎನ್. ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರೌಢ ಶಾಲಾ ವಿಭಾಗದ ಪ್ರತಿಭಾ ಪುರಸ್ಕಾರದ ನಿರ್ವಹಣೆಯನ್ನು ಶಿಕ್ಷಕಿ ಗಾಯತ್ರಿ ಹಾಗೂ

ಪದವಿ ಪೂರ್ವ ವಿಭಾಗದ ಪ್ರತಿಭಾ ಪುರಸ್ಕಾರದ ನಿರ್ವಹಣೆಯನ್ನು ಉಪನ್ಯಾಸಕರಾದ ಪ್ರಸನ್ನ ಎನ್.ಎಚ್. ನೆರವೇರಿಸಿದರು. ವಿದ್ಯಾರ್ಥಿಗಳಾದ ತನುಜ್ಞ ಸಿ.ಕೆ ಹಾಗು ಕೆ.ಆಯಿಷಾತ್ ಅಜ್ಮೀನ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಸಂಘಗಳ ಉದ್ಘಾಟನೆ:
ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಸಾಂಸ್ಕೃತಿಕ ಸಂಘ, ರೀಡರ್ಸ್ ಕ್ಲಬ್, ಇಕೋ ಕ್ಲಬ್ ಹಾಗೂ ರೆಡ್ ಕ್ರಾಸ್ ಘಟಕದ ಉದ್ಘಾಟನೆ ನಡೆಯಿತು. ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಕಲಾ ಸಂಘ ಹಾಗೂ ರೆಡ್ ಕ್ರಾಸ್ ಘಟಕದ ಉದ್ಘಾಟನೆ ನಡೆದು ನೂತನ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.