ಸುಳ್ಯ : ಶ್ರೀ ಶಾರದಾ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ರಾಂಕ್ ಹಾಗೂ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಶಾರದಾ ವಿದ್ಯಾಸಂಸ್ಥೆಗಳ
ಪ್ರಾಯೋಜಕ ಸಂಸ್ಥೆ ದ ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಢ್ಪಂಗಾಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಡ್ವೇಕೇಟ್ ಅಶ್ವಿನಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಉಪನ್ಯಾಸಕ ದಾಮೋದರ ಎಂ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞೆ ಬೋಧಿಸಿದರು.
ಕಾರ್ಯಕ್ರಮದಲ್ಲಿ ಕಲಾ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ರಾಂಕ್ ಗಳಿಸಿದ ಫಾತಿಮಾತ್ ಶಹ್ಲಾ ಅವರಿಗೆ ಚಿನ್ನದ ಪದಕವನ್ನು ನೀಡಿ ಸನ್ಮಾನಿಸಲಾಯಿತು. ಡಿಸ್ಟಿಂಕ್ಷನ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಹೆಚ್ ಸನ್ಮಾನಿತರನ್ನು ಸಭೆಗೆ ಪರಿಚಯಿಸಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್, ಖಜಾಂಜಿ ಮಾಧವ ಗೌಡ, ಶಾರದಾ ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ ಎ ಎಸ್, ನಿವೃತ್ತ ಪ್ರಾಂಶುಪಾಲೆ ದಯಮಾಣಿ.ಕೆ, ಶಾರದಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ ಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲ ಎ.ಎಸ್. ಸ್ವಾಗತಿಸಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ತಾರಕಾಂತಿ ವಂದಿಸಿದರು. ವಿದ್ಯಾರ್ಥಿನಿಯರಾದ ಶಿಫಾ ಫಾತಿಮಾ ಮತ್ತು ದಿಯಾ ಕಾರ್ಯಕ್ರಮ ನಿರೂಪಿಸಿದರು






