ಸುಳ್ಯ: ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಉಪನ್ಯಾಸಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿದರು. ಅಪರಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಸ್ವರ್ಣಕಲಾ.ಎ. ಎಸ್ ರವರು ಶಿಕ್ಷಕರ ದಿನಾಚರಣೆಯ ಬಗ್ಗೆ ಮಾತನಾಡಿದರು ಪ್ರಾಂಶುಪಾಲರಾದ ದಯಾಮಣಿ .ಕೆ. ಅಧ್ಯಕ್ಷತೆ ವಹಿಸಿದ್ದರು. ನಂತರ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ವೃಂದದವರು ವಿವಿಧ ಮನೋರಂಜನಾ ಕಾರ್ಯಕ್ರಮವನ್ನು ನೀಡಿ ವಿದ್ಯಾರ್ಥಿನಿಯರನ್ನು ಮನರಂಜಿಸಿದರು.