ಸುಳ್ಯ:ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯರಿಗೆ ನೈತಿಕ ಮೌಲ್ಯಗಳ ಬಗ್ಗೆ ಉಪನ್ಯಾಸವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ
ಜಿಲ್ಲಾ ಸಂಯೋಜಕರಾದ ಮೂಕಾಂಬಿಕ .ಏನ್. ರಾವ್ ರವರು ವಿದ್ಯಾರ್ಥಿನಿಯರಿಗೆ ವಿಶೇಷ ಉಪನ್ಯಾಸ ನೀಡಿದರು. ಯುವ ಸಂಯೋಜಕರಾದ ಉಮೇಶ್ ಹೂಲಿ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ನಿರ್ದೇಶಕರಾದ ಡಾ. ಸಾಯಿ ಗೀತಾ ಜ್ಞಾನೇಶ್ ಅವರು ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ. ಕೆ ಅವರು ವಹಿಸಿದ್ದರು. ಸಂಸ್ಥೆಯ ಎಲ್ಲಾ ಉಪನ್ಯಾಸಕ ಮತ್ತು ವಿದ್ಯಾರ್ಥಿ ವೃಂದದವರು ಸಮಾರಂಭದಲ್ಲಿ ಭಾಗವಹಿಸಿದರು.









