ಸುಳ್ಯ:ಸುಳ್ಯದ ಶ್ರೀ ಶಾರದಾ ಪ್ರೌಢಶಾಲೆ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.9ರಂದು ಅಮೃತ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ಆಕಾಶವಾಣಿ ಹಿರಿಯ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಮಾತನಾಡಿ
“ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ನಿಷ್ಠೆಯಿಂದ ತೊಡಗಿಸಿಕೊಳ್ಳಬೇಕು. ಆಗ ಸಮಾಜದಲ್ಲಿ
ದೊಡ್ಡ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು ಹೇಳಿದ ಜೀವನ ಪಾಠವನ್ನು ಕೇಳಿ ಅಳವಡಿಸಿಕೊಳ್ಳಿ. ಅದು ನಿಮ್ಮ ಭವಿಷ್ಯದ ದಾರಿಯಾಗುತ್ತದೆ ಎಂದ ಅವರು ನಾವು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಹುಟ್ಟಿದ ಊರು, ಶಿಕ್ಷಣ ನೀಡಿದ ಸಂಸ್ಥೆ ಹಾಗೂ ಶಿಕ್ಷಕರನ್ನು ಎಂದೆಂದೂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ದ.ಕ. ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ. ಮುಖ್ಯ ಅತಿಥಿಗಳಾಗಿದ್ದರು.
ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾದ ಕಮಲ ಬಾಲಚಂದ್ರ, ದ.ಕ. ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್, ನಿರ್ದೇಶಕರಾದ ತಂಗಮ್ಮ, ಜಯರಾಮ ಚಿಲ್ತಡ್ಕ, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷರಾದ ಗದಾಧರ, ಮಹೇಶ್, ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ ಕೆ ಹಾಗೂ ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಇದ್ದರು. ಉಪನ್ಯಾಸಕಿ ಸ್ವರ್ಣಕಲಾ ಎ.ಎಸ್. ಸ್ವಾಗತಿಸಿದರು. ಉಪನ್ಯಾಸಕಿ ಅರ್ಪಣ ವಂದಿಸಿದರು. ವಿದ್ಯಾರ್ಥಿನಿಯರಾದ ಶ್ರೀವಲ್ಲಿ ಹಾಗೂ ವಿಷ್ಣುಪ್ರಿಯ ಕಾರ್ಯಕ್ರಮ ನಿರೂಪಿಸಿದರು.