
ಸುಳ್ಯ:ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಎನ್.ಸಿ.ಸಿ ನೌಕಾದಳ ಘಟಕದ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕಿ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ತಂಗಮ್ಮ ಕೆ. ಎಸ್. ವಹಿಸಿದ್ದರು. ಕಾರ್ಯಕ್ರಮವನ್ನು ಮಂಗಳೂರಿನ
ಜೆಪ್ಪು ಕ್ಯಾಸಿಯಾ ಪ್ರೌಡಶಾಲೆಯ ಎನ್.ಸಿ.ಸಿ. ಅಧಿಕಾರಿ
ಅರುಣ್ ಪ್ರಸಾದ್ ರೈ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ. ಮಹಾದೇವ ಎನ್.ಸಿ.ಸಿ. ಕೊಠಡಿಯನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಕೆ.ಎಸ್.ಎಸ್.ಕಾಲೇಜಿನ ಪ್ರಾಧ್ಯಾಪಕ ಡಾ.ಗೋವಿಂದ ಎನ್. ಎಸ್. ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎನ್.ಸಿ.ಸಿ. ವಿದ್ಯಾರ್ಥಿನಿಯರಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ. ಉಪಸ್ಥಿತರಿದ್ದರು. ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ.ಪಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್.ಸಿ.ಸಿ. ಅಧಿಕಾರಿ ಅರ್ಪಣಾ ವಂದಿಸಿದರು. ಶಿಕ್ಷಕಿ ಗಾಯತ್ರಿ ಸಿ. ಎನ್. ಕಾರ್ಯಕ್ರಮ ನಿರೂಪಿಸಿದರು.