ಸುಳ್ಯ:ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ ಸುಳ್ಯ ಇದರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್. ಮಂಗಳೂರು ಇವರು ಕೊಡುಗೆಯಾಗಿ ನೀಡಿದ ವಿಸ್ತ್ರತ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.24 ರಂದು ಪೂ.10ಕ್ಕೆ ಅಮೃತ ಭವನದಲ್ಲಿ ನಡೆಯಲಿದೆ. ಶ್ರೀ ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ನೂತನ ವಿಸ್ತ್ರತ ಕಟ್ಟಡದ ಉದ್ಘಾಟನೆಯನ್ನು

ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ನೆರವೇರಿಸಲಿದ್ದಾರೆ. ಎಂ.ಆರ್.ಪಿ.ಎಲ್.ಒ.ಎನ್.ಜಿ.ಸಿ.ಮಂಗಳೂರು ಇದರ ಗ್ರೂಪ್
ಜನರಲ್ ಮೆನೇಜರ್ ಕೃಷ್ಣ ಹೆಗ್ಡೆ ಮಿಯಾರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ದ.ಕ.ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡಂಗಾಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ., ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ ಭಾಗವಹಿಸಲಿದ್ದಾರೆ ಎಂದು ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ರೇವತಿ ನಂದನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.