ಸುಳ್ಯ: ಶ್ರೀ ಶಾರದ ಅನುದಾನಿತ ಪ್ರೌಢಶಾಲೆಯಲ್ಲಿ ಇಲಾಖಾ ಅನುಮತಿಯೊಂದಿಗೆ ಸಹ ಶಿಕ್ಷಣವನ್ನು ಪ್ರಾರಂಭಿಸಲಾಗಿದ್ದು ,ಈ ನಿಟ್ಟಿನಲ್ಲಿ 2024 25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಉದ್ಘಾಟಿಸಿದರು. ವೇದಿಕೆಯಲ್ಲಿ
ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಪ್ರಧಾನ ಕಾರ್ಯದರ್ಶಿ ಡಾ.ರೇವತಿ ನಂದನ್ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು.
ಶ್ರೀ ಶಾರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ.ಕೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ನಾರಾಯಣ ಜಟ್ಟಿಪಳ್ಳ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾವತಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಕ್ಷಿತ ಕೆ.ಆರ್ ತಂಡದವರು ಪ್ರಾರ್ಥಿಸಿದರು. ಕನ್ನಡ ಶಿಕ್ಷಕರಾದ ಶ್ರೀಮತಿ ಗಾಯತ್ರಿ ಸಿ.ಎನ್ ರವರು ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದರು.ಸಮಾಜ ವಿಜ್ಞಾನ ಶಿಕ್ಷಕರಾದ ಸುನೀತ.ಕೆ ಆರ್ ಇವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು,ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.









