ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘ ದ ಅಧ್ಯಕ್ಷರಾದ ಧನಂಜಯ ಅಡ್ಪಾಂಗಾಯ ವಹಿಸಿದ್ದರು. ವಿದ್ಯಾರ್ಥಿಗಳ ಮುಂದಿನ
ಉತ್ತಮ ಭವಿಷ್ಯ ನಿರ್ಮಿಸುವುದರಲ್ಲಿ ಪೋಷಕರ ಪಾತ್ರದ ಬಗ್ಗೆ ಅವರು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ.ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪೋಷಕರು ಸಲಹೆ ಸೂಚನೆಗಳನ್ನು ನೀಡಿದರು. ಸ್ವಾತಿ ಎಂ ಸ್ವಾಗತಿಸಿ, ಉಪನ್ಯಾಸಕ ದಾಮೋದರ. ಎನ್ ಕಾರ್ಯಕ್ರಮ ನಿರೂಪಿಸಿದರು.