ಸುಳ್ಯ:ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ
ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಯೋಗ ಪಟು ಕೃತಿಕಾ ಮದುವೆಗದ್ದೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯೋಗದ ಮಹತ್ವದ ಬಗ್ಗೆ

ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ.ಕೆ ಅವರು ವಹಿಸಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ತಾರಕಾಂತಿ .ಬಿ
ಸ್ವಾಗತಿಸಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ನಿತೇಶ್ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸ್ವಾತಿ ಎಂ ಕಾರ್ಯಕ್ರಮ ನಿರೂಪಿಸಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗ ತರಬೇತುದಾರರಾದ ಕೃತಿಕಾ ಮದುವೆಗದ್ದೆ ರವರು ವಿದ್ಯಾರ್ಥಿಗಳಿಗೆ ಯೋಗಾಸನದ ಪ್ರಾತ್ಯಕ್ಷತೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಭೋದಕೇತರ ವೃಂದದವರು ಉಪಸ್ಥಿತರಿದ್ದರು.